ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಲಾಂಗ್ ಜಂಪ್ ಟಿ47 ನಲ್ಲಿ ಚಿನ್ನದ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
19 OCT 2026 10:09PM by PIB Bengaluru
ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಲಾಂಗ್ ಜಂಪ್ ಟಿ47 ಸ್ಪರ್ಧೆಯಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಈ ಸ್ಪರ್ಧೆಯಲ್ಲಿ ಚೊಚ್ಚಲ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದಿರುವುದು ಈ ಸಾಧನೆಯನ್ನು ಇನ್ನಷ್ಟು ವಿಶೇಷಗೊಳಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ನಿಶಾದ್ ಕುಮಾರ್ ಅವರ ಬಹುಮುಖ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಶ್ರೇಷ್ಠತೆಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಈ ಕುರಿತು ಟ್ವೀಟ್ ಮಾಡಿದೆ;
"ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಲಾಂಗ್ ಜಂಪ್ ಟಿ47 ಸ್ಪರ್ಧೆಯಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದ ನಿಶಾದ್ ಕುಮಾರ್ ಬಗ್ಗೆ ತುಂಬಾ ಹೆಮ್ಮೆಯಿದೆ. ಈ ಸ್ಪರ್ಧೆಯಲ್ಲಿ ಅವರ ಚೊಚ್ಚಲ ಪಂದ್ಯದಲ್ಲಿ ಚಿನ್ನ ಗೆದ್ದಿರುವುದು ಸಾಧನೆಯನ್ನು ಇನ್ನಷ್ಟು ವಿಶೇಷವಾಗಿಸುತ್ತದೆ. ಅವರ ಬಹುಮುಖ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಶ್ರೇಷ್ಠತೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2325406)
ವಿಸಿಟರ್ ಕೌಂಟರ್ : 6