ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ 2026ರ ಮಹಿಳೆಯರ 1500 ಮೀಟರ್ ಟಿ12/13 ನಲ್ಲಿ ಚಿನ್ನದ ಪದಕ ಗೆದ್ದ ಸೌಮ್ಯಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
19 OCT 2026 10:18PM by PIB Bengaluru
ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಮಹಿಳೆಯರ 1500 ಮೀಟರ್ ಟಿ 12/13 ಸ್ಪರ್ಧೆಯಲ್ಲಿ ವೈಯಕ್ತಿಕ ಅತ್ಯುತ್ತಮ ಸಮಯದೊಂದಿಗೆ ಚಿನ್ನದ ಪದಕ ಗೆದ್ದ ಸೌಮ್ಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಚೊಚ್ಚಲ ಸ್ಪರ್ಧೆಯಲ್ಲಿ ಅವರ ಅಸಾಧಾರಣ ಪ್ರದರ್ಶನವು ಅವರ ಪ್ರತಿಭೆ, ಸಮರ್ಪಣೆ ಮತ್ತು ದೃಢನಿಶ್ಚಯವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದೆ;
"ನಿಜವಾಗಿಯೂ ಒಂದು ಸುವರ್ಣ ಆರಂಭ!
ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಸೌಮ್ಯ ಅದ್ಭುತ ಛಾಪು ಮೂಡಿಸಿದ್ದಾರೆ, ಮಹಿಳೆಯರ 1500 ಮೀಟರ್ ಟಿ 12/13 ಸ್ಪರ್ಧೆಯಲ್ಲಿ ವೈಯಕ್ತಿಕ ಅತ್ಯುತ್ತಮ ಸಮಯದೊಂದಿಗೆ ಚಿನ್ನ ಗೆದ್ದಿದ್ದಾರೆ!
ಚೊಚ್ಚಲ ಸ್ಪರ್ದೆಯಲ್ಲಿ ಇಂತಹ ಅಸಾಧಾರಣ ಪ್ರದರ್ಶನವನ್ನು ನೀಡಿರುವುದು ಅವರ ಪ್ರತಿಭೆ, ಸಮರ್ಪಣೆ ಮತ್ತು ದೃಢನಿಶ್ಚಯದ ಬಗ್ಗೆ ಮಾತನಾಡುತ್ತದೆ. ಅವರಿಗೆ ಅಭಿನಂದನೆಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2325418)
ವಿಸಿಟರ್ ಕೌಂಟರ್ : 5