ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಸೋನಾಲ್ ಬೆನ್ ಪಟೇಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
20 OCT 2026 6:48PM by PIB Bengaluru
ಏಷ್ಯನ್ ಪ್ಯಾರಾ ಗೇಮ್ಸ್ ನ ಮಹಿಳಾ ಸಿಂಗಲ್ಸ್ ಕ್ಲಾಸ್ 3 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೋನಾಲ್ ಬೆನ್ ಪಟೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಅಭಿನಂದಿಸಿದ್ದಾರೆ.
ಏಷ್ಯನ್ ಪ್ಯಾರಾ ಗೇಮ್ಸ್ ಸಾಧನೆಗಳಿಗೆ ಮೊದಲ ವೈಯಕ್ತಿಕ ಪದಕವನ್ನು ಸೇರಿಸಿದ್ದಾರೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಅವರ ಕ್ರೀಡಾ ಪ್ರಯಾಣದಲ್ಲಿ ಈ ವಿಶೇಷ ಕ್ಷಣವು ವರ್ಷಗಳ ಸಮರ್ಪಣೆ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಸಾಧ್ಯವಾಗಿದೆ ಎಂದು ಹೇಳಿದರು ಮತ್ತು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
"ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಸೋನಾಲ್ ಬೆನ್ ಪಟೇಲ್ ಅವರ ಯಶಸ್ಸಿನಿಂದ ಸಂತೋಷವಾಗಿದೆ! ಅವರು ಮಹಿಳಾ ಸಿಂಗಲ್ಸ್ ಕ್ಲಾಸ್ 3 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ, ಏಷ್ಯನ್ ಪ್ಯಾರಾ ಗೇಮ್ಸ್ ಸಾಧನೆಗೆ ಮೊದಲ ವೈಯಕ್ತಿಕ ಪದಕವನ್ನು ಸೇರಿಸಿದ್ದಾರೆ. ಇದು ಅವರ ಕ್ರೀಡಾ ಪಯಣದಲ್ಲಿ ಒಂದು ವಿಶೇಷ ಕ್ಷಣವಾಗಿದೆ, ಇದು ವರ್ಷಗಳ ಸಮರ್ಪಣೆ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಸಾಧ್ಯವಾಗಿದೆ: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2325727)
ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam