ಪ್ರಕಟಣಾ ದಿನಾಂಕ:
20 OCT 2026 7:44PM by PIB Bengaluru
ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೃಷ್ಠಿ ಅರೋರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.
ತಮ್ಮ ಮೊದಲ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಪಡೆದ ಈ ಪದಕವು ಅದ್ಭುತ ಸೃಷ್ಠಿ ಅರೋರಾ ಅವರ ಅದ್ಬುತ ಆರಂಭವಾಗಿದೆ ಎಂದು ಹೇಳಿದ ಶ್ರೀ ಮೋದಿಯವರು, ಸೃಷ್ಠಿ ಅರೋರಾ ಅವರು ದೇಶವನ್ನು ಹೆಮ್ಮೆಪಡುವಂತೆ ಮಾಡುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿ, ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
X ನ ಪೋಸ್ಟ್‌ನಲ್ಲಿ ಪ್ರಧಾನ ಮಂತ್ರಿಯವರ ಕಾರ್ಯಾಲಯ ಹೀಗೆ ಹಂಚಿಕೊಂಡಿದೆ:
"ತಮ್ಮ ಮೊದಲ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಸ್ಪರ್ಧಿಸುತ್ತಿರುವ ಸೃಷ್ಠಿ ಅರೋರಾ ಅವರು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಈ ಪದಕ ಅವರ ಅದ್ಭುತ ಆರಂಭವಾಗಿದೆ ಮತ್ತು ಸೃಷ್ಠಿ ದೇಶವನ್ನು ಹೆಮ್ಮೆಪಡುವಂತೆ ಮುಂದುವರಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ. ಅಭಿನಂದನೆಗಳು ಮತ್ತು ಶುಭಾಶಯಗಳು: ಪ್ರಧಾನಮಂತ್ರಿ @narendramodi"
*****