ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಆಯುಷ್ ವರ್ಮಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 21 OCT 2026 6:36PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಶಾಟ್ ಪುಟ್ (F53 ವಿಭಾಗ) ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಚಿನ್ನದ ಪದಕ ಗೆದ್ದ ಆಯುಷ್ ವರ್ಮಾ ಅವರನ್ನು ಅಭಿನಂದಿಸಿದ್ದಾರೆ.

ಶಾಟ್ ಪುಟ್‌ನಲ್ಲಿ ಚಿನ್ನ ಮತ್ತು ಜಾವೆಲಿನ್ ಥ್ರೋನಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ, ಆಯುಷ್ ತಮ್ಮ ಚೊಚ್ಚಲ ಏಷ್ಯನ್ ಪ್ಯಾರಾ ಗೇಮ್ಸ್ ಅಭಿಯಾನವನ್ನು ಒಟ್ಟು ಎರಡು ಪದಕಗಳೊಂದಿಗೆ ಮುಕ್ತಾಯಗೊಳಿಸಿದ್ದಾರೆ ಎಂದು ಉಲ್ಲೇಖಿಸಿದ ಶ್ರೀ ಮೋದಿ, ಇದು ಅವರ ಪ್ರತಿಭೆ, ಬಹುಮುಖ ಕೌಶಲ್ಯ ಮತ್ತು ದೃಢ ನಿಶ್ಚಯದ ಅದ್ಭುತ ಪ್ರದರ್ಶನವಾಗಿದೆ ಎಂದು ಬಣ್ಣಿಸಿದರು. ಅಲ್ಲದೆ, ಅವರ ಮುಂದಿನ ಕ್ರೀಡಾ ಪಯಣಕ್ಕೆ ಶುಭ ಹಾರೈಸಿದರು.

ಪ್ರಧಾನಮಂತ್ರಿಗಳ ಕಚೇರಿ 'ಎಕ್ಸ್' ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದೆ:

"2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಶಾಟ್ ಪುಟ್ (F53 ವಿಭಾಗ) ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಚಿನ್ನದ ಪದಕ ಗೆದ್ದ ಆಯುಷ್ ವರ್ಮಾ ಅವರಿಗೆ ಅಭಿನಂದನೆಗಳು. ಶಾಟ್ ಪುಟ್‌ನಲ್ಲಿ ಚಿನ್ನ ಮತ್ತು ಜಾವೆಲಿನ್ ಥ್ರೋನಲ್ಲಿ ಕಂಚಿನ ಪದಕವನ್ನು ಗೆಲ್ಲುವ ಮೂಲಕ, ಆಯುಷ್ ತಮ್ಮ ಚೊಚ್ಚಲ ಏಷ್ಯನ್ ಪ್ಯಾರಾ ಗೇಮ್ಸ್ ಅಭಿಯಾನವನ್ನು ಎರಡು ಪದಕಗಳೊಂದಿಗೆ ಪೂರ್ಣಗೊಳಿಸಿದ್ದಾರೆ. ಇದು ನಿಜಕ್ಕೂ ಪ್ರತಿಭೆ, ಬಹುಮುಖ ಕೌಶಲ್ಯ ಮತ್ತು ದೃಢ ನಿಶ್ಚಯದ ಅದ್ಭುತ ಪ್ರದರ್ಶನವಾಗಿದೆ. ಅವರ ಮುಂದಿನ ಕ್ರೀಡಾ ಪಯಣಕ್ಕೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2326331) ವಿಸಿಟರ್ ಕೌಂಟರ್ : 4
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Gujarati , Tamil , Malayalam