ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ರವಿ ಕಾರ್ತಿಕ್ ಬುಡಿಗಿನಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 22 OCT 2026 7:00PM by PIB Bengaluru

ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ ಪುರುಷರ 50 ಮೀಟರ್ ಫ್ರೀಸ್ಟೈಲ್ S13 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ರವಿ ಕಾರ್ತಿಕ್ ಬುಡಿಗಿನಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಅವರ ಈ ಸಾಧನೆಯ ಬಗ್ಗೆ ಬಹಳ ಹೆಮ್ಮೆಯಿದೆ ಎಂದು ತಿಳಿಸಿದ ಶ್ರೀ ಮೋದಿ, ಅವರ ಉತ್ಸಾಹ ಮತ್ತು ಬದ್ಧತೆ ಶ್ಲಾಘನೀಯ ಎಂದು ಬಣ್ಣಿಸಿದರು. ಅಲ್ಲದೇ, ಅವರ ಮುಂದಿನ ಕ್ರೀಡಾ ಸ್ಪರ್ಧೆಗಳಿಗೆ ಶುಭ ಹಾರೈಸಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:

"ಪುರುಷರ 50 ಮೀಟರ್ ಫ್ರೀಸ್ಟೈಲ್ S13 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ರವಿ ಕಾರ್ತಿಕ್ ಬುಡಿಗಿನಾ ಅವರ ಬಗ್ಗೆ ಬಹಳ ಹೆಮ್ಮೆಯಿದೆ. ಅವರ ಉತ್ಸಾಹ ಮತ್ತು ಬದ್ಧತೆ ಶ್ಲಾಘನೀಯ. ಅವರ ಮುಂದಿನ ಸ್ಪರ್ಧೆಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2326984) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Gujarati , Malayalam