ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಅಭಿಜಿತ್‌ ಸಖುಜಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 22 OCT 2026 6:13PM by PIB Bengaluru

ಏಷ್ಯನ್‌ ಪ್ಯಾರಾ ಗೇಮ್ಸ್‌ 2026ರ ಪುರುಷರ ಸಿಂಗಲ್ಸ್‌ ಎಸ್‌ಎಲ್‌ 4 ಪ್ಯಾರಾ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅಭಿಜೀತ್‌ ಸಖುಜಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಮೊದಲ ಬಾರಿಗೆ ಪೋಡಿಯಂ ವೇದಿಕೆಯನ್ನು ತಲುಪಿರುವುದು ಶ್ಲಾಘನೀಯ ಸಾಧನೆಯಾಗಿದ್ದು, ಇದು ಅವರ ಪ್ರತಿಭೆ, ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಕ್ರೀಡೆಯಲ್ಲಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು.

ಎಕ್ಸ್‌ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

‘‘ಅಭಿಜಿತ್‌ ಸಖುಜಾ ಅವರಿಗೆ ಭರವಸೆಯ ಪದಾರ್ಪಣೆ!

ಏಷ್ಯನ್‌ ಪ್ಯಾರಾ ಗೇಮ್ಸ್‌ 2026ರ ಪುರುಷರ ಸಿಂಗಲ್ಸ್‌ ಎಸ್‌ಎಲ್‌ 4 ಪ್ಯಾರಾ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಮೊದಲ ಬಾರಿಗೆ ಪೋಡಿಯಂ ವೇದಿಕೆಯನ್ನು ತಲುಪಿರುವುದು ಶ್ಲಾಘನೀಯ ಸಾಧನೆಯಾಗಿದೆ ಮತ್ತು ಅವರ ಪ್ರತಿಭೆ, ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ. ಕ್ರೀಡೆಯಲ್ಲಿ ಅವರಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi’’

 

*****


(ಪ್ರಕಟಣೆ ಐ.ಡಿ.: 2327052) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Gujarati , Tamil , Malayalam