ಪ್ರಕಟಣಾ ದಿನಾಂಕ:
22 OCT 2026 6:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಭಾರತ-ಇಸ್ರೇಲ್ ಸಂಬಂಧಗಳ ನಿರಂತರ ಆವೇಗವನ್ನು ಉಭಯ ನಾಯಕರು ಸ್ವಾಗತಿಸಿದರು ಮತ್ತು ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದರು.
ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಈ ಪ್ರದೇಶದಲ್ಲಿಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದರು.
ಮಾತುಕತೆ ಮತ್ತು ರಾಜತಾಂತ್ರಿಕತೆಯು ಮುಂದಿನ ಮಾರ್ಗವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಕರೆಯನ್ನು ಪುನರುಚ್ಚರಿಸಿದರು. ಇದೇ ವೇಳೆ, ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು.
*****