ಪ್ರಕಟಣಾ ದಿನಾಂಕ:
22 OCT 2026 9:48PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪುರುಷರ 400 ಮೀಟರ್ ಟಿ47 (T47) ವಿಭಾಗದಲ್ಲಿ ಅತ್ಯುತ್ತಮ ಸಮಯದೊಂದಿಗೆ ಚಿನ್ನದ ಪದಕ ಗೆದ್ದ ದಿಲೀಪ್ ಅವರಿಗೆ ಇಂದು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ತಮ್ಮ ಪ್ರದರ್ಶನವನ್ನು ಇನ್ನಷ್ಟು ಉತ್ತಮಪಡಿಸಿಕೊಂಡು, ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಅವರ ವೇಗ, ದೃಢನಿಶ್ಚಯ ಮತ್ತು ಸಮರ್ಪಣಾ ಭಾವ ನಿಜಕ್ಕೂ ಶ್ಲಾಘನೀಯವಾಗಿದ್ದು, ಭಾರತಕ್ಕೆ ಅವರ ಬಗ್ಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯವು 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:
"2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪುರುಷರ 400 ಮೀಟರ್ ಟಿ47 (T47) ವಿಭಾಗದಲ್ಲಿ ಅತ್ಯುತ್ತಮ ಸಮಯದೊಂದಿಗೆ ಚಿನ್ನದ ಪದಕ ಗೆದ್ದ ದಿಲೀಪ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ತಮ್ಮ ಪ್ರದರ್ಶನವನ್ನು ಸುಧಾರಿಸಿಕೊಂಡು, ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ. ಅವರ ವೇಗ, ದೃಢನಿಶ್ಚಯ ಮತ್ತು ಸಮರ್ಪಣಾ ಭಾವ ನಿಜಕ್ಕೂ ಶ್ಲಾಘನೀಯ. ಭಾರತಕ್ಕೆ ಅವರ ಬಗ್ಗೆ ಹೆಮ್ಮೆಯಿದೆ: ಪ್ರಧಾನಮಂತ್ರಿ @narendramodi"
*****