ಪ್ರಕಟಣಾ ದಿನಾಂಕ:
23 OCT 2026 7:25PM by PIB Bengaluru
ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಜಾವೆಲಿನ್ ಥ್ರೋ ಎಫ್ 37 / ಎಫ್ 38 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಹೊಸ ವಿಶ್ವ ದಾಖಲೆ ನಿರ್ಮಿಸಿದ ಹ್ಯಾನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಇದು ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ಗೆ ಗಮನಾರ್ಹ ಸಾಧನೆ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಹ್ಯಾನಿ ಹೊಸ ಎತ್ತರವನ್ನು ತಲುಪುವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದೆ:
‘‘ಚಿನ್ನ ಮತ್ತು ಹೊಸ ವಿಶ್ವ ದಾಖಲೆ! ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ ಜಾವೆಲಿನ್ ಥ್ರೋ ಎಫ್ 37 / ಎಫ್ 38 ಸ್ಪರ್ಧೆಯಲ್ಲಿಅತ್ಯುತ್ತಮ ಪ್ರದರ್ಶನ ನೀಡಿದ ಹ್ಯಾನಿ ಅವರಿಗೆ ಅಭಿನಂದನೆಗಳು. ಇದು ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ಗೆ ಗಮನಾರ್ಹ ಸಾಧನೆ ಮತ್ತು ಹೆಮ್ಮೆಯ ಕ್ಷಣವಾಗಿದೆ. ಅವರು ಹೊಸ ಎತ್ತರವನ್ನು ತಲುಪುವುದನ್ನು ಮುಂದುವರಿಸಲಿ: ಪ್ರಧಾನಮಂತ್ರಿ @narendramodi’’
*****