ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನ ಗೆದ್ದು ಹೊಸ ವಿಶ್ವ ದಾಖಲೆ ನಿರ್ಮಿಸಿದ ಸಂದೀಪ್‌ ಕುಮಾರ್‌ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 23 OCT 2026 7:27PM by PIB Bengaluru

ಪುರುಷರ 400 ಮೀಟರ್‌ ಟಿ 64 ಸ್ಪರ್ಧೆಯಲ್ಲಿ ಹೊಸ ವಿಶ್ವ ದಾಖಲೆಯೊಂದಿಗೆ ಚಿನ್ನ ಗೆದ್ದ ಚೊಚ್ಚಲ ಕ್ರೀಡಾಪಟುವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಸಂದೀಪ್‌ ಕುಮಾರ್‌ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು. ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ 100ನೇ ಪದಕವಾಗಿ ಇನ್ನಷ್ಟು ವಿಶೇಷವಾಗಿದೆ.

ಅವರ ಸಾಧನೆ ರಾಷ್ಟ್ರಕ್ಕೆ ಹೆಮ್ಮೆಯ ಮೈಲಿಗಲ್ಲಾಗಿದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಅವರು ಭಾರತವನ್ನು ಹೆಮ್ಮೆಪಡುವಂತೆ ಮಾಡುವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯ ಎಕ್ಸ್‌ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದೆ:

‘‘ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ಗೆ ಒಂದು ಸುವರ್ಣ ಕ್ಷಣ! ಪುರುಷರ 400 ಮೀಟರ್‌ಟಿ 64 ಸ್ಪರ್ಧೆಯಲ್ಲಿ ಹೊಸ ವಿಶ್ವ ದಾಖಲೆಯೊಂದಿಗೆ ಚಿನ್ನ ಗೆದ್ದ ಸಂದೀಪ್‌ ಕುಮಾರ್‌ ಅವರಿಗೆ ಅಭಿನಂದನೆಗಳು. ಚೊಚ್ಚಲ ಆಟಗಾರನ ಅತ್ಯುತ್ತಮ ಪ್ರದರ್ಶನವು ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ 100ನೇ ಪದಕವಾಗಿದ್ದು, ಇದು ಇನ್ನಷ್ಟು ವಿಶೇಷವಾಗಿದೆ. ಅವರು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡುವುದನ್ನು ಮುಂದುವರಿಸಲಿ: ಪ್ರಧಾನಮಂತ್ರಿ @narendramodi’’

 

*****


(ಪ್ರಕಟಣೆ ಐ.ಡಿ.: 2327728) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Gujarati , Malayalam