ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಜೆಹಾನ್ ದೊರಬ್ ಮದನ್ ಮತ್ತು ಶುಭಂ ವಾಧ್ವಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 23 OCT 2026 7:17PM by PIB Bengaluru

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಪುರುಷರ ಡಬಲ್ಸ್ ಕ್ಲಾಸ್ ಎಂಡಿ‌ 4 ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ಜೆಹಾನ್ ದೊರಬ್ ಮದನ್ ಮತ್ತು ಶುಭಂ ವಾಧ್ವಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಈ ಸಾಧನೆಯೊಂದಿಗೆ ಕ್ರೀಡಾಕೂಟದ ಈ ವಿಭಾಗದಲ್ಲಿ ಭಾರತಕ್ಕೆ ಮೊಟ್ಟಮೊದಲ ಪದಕ ಲಭಿಸಿದೆ ಎಂದು ತಿಳಿಸುತ್ತಾ ಶ್ರೀ ಮೋದಿ ಅವರು, ಮುಂದಿನ ದಿನಗಳಲ್ಲಿ ಇವರಿಬ್ಬರೂ ಇನ್ನೂ ಹೆಚ್ಚಿನ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಹಂಚಿಕೊಂಡಿದೆ: 

“ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಪುರುಷರ ಡಬಲ್ಸ್ 'ಕ್ಲಾಸ್ ಎಂ ಡಿ 4' ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಜಹಾನ್ ದೊರಬ್ ಮದನ್ ಮತ್ತು ಶುಭಂ ವಾಧ್ವಾ ಅವರಿಗೆ ಅಭಿನಂದನೆಗಳು! ಕ್ರೀಡಾಕೂಟದ ಈ ವಿಭಾಗದಲ್ಲಿ ಭಾರತಕ್ಕೆ ಲಭಿಸಿರುವ ಮೊದಲ ಪದಕ ಇದಾಗಿದೆ. ಮುಂದಿನ ದಿನಗಳಲ್ಲಿ ಇಬ್ಬರೂ ಇನ್ನೂ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****


(ಪ್ರಕಟಣೆ ಐ.ಡಿ.: 2327734) ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ: Urdu , English , Marathi , हिन्दी , Gujarati , Tamil , Malayalam