ಪ್ರಕಟಣಾ ದಿನಾಂಕ:
23 OCT 2026 10:23PM by PIB Bengaluru
ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 200 ಮೀಟರ್ ಟಿ37 ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಕೇಶ್ ಭಾಯಿ ಭಟ್ ಅವರನ್ನು ಅಭಿನಂದಿಸಿದ್ದಾರೆ.
ಈ ಆವೃತ್ತಿಯಲ್ಲಿ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಅವರು ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಹೇಳಿರುವ ಶ್ರೀ ಮೋದಿ ಅವರು, ರಾಕೇಶ್ ಅವರು ಭವಿಷ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಇನ್ನೂ ಅನೇಕ ಮೈಲಿಗಲ್ಲುಗಳನ್ನು ತಲುಪಲಿ ಎಂದು ಆಶಿಸಿದ್ದಾರೆ. ಮುಂಬರುವ ವರ್ಷಗಳಲ್ಲಿ ಅವರಿಗೆ ನಿರಂತರ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:
"ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ 200 ಮೀಟರ್ ಟಿ 37 ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ರಾಕೇಶ್ ಭಾಯಿ ಭಟ್ ಅವರಿಗೆ ಅಭಿನಂದನೆಗಳು! ಈ ಕ್ರೀಡಾಕೂಟದಲ್ಲಿ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಅವರು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಅವರು ಇದೇ ರೀತಿ ಉತ್ತಮ ಸಾಧನೆ ಮುಂದುವರಿಸಲಿ ಮತ್ತು ಇನ್ನೂ ಅನೇಕ ಮೈಲಿಗಲ್ಲುಗಳನ್ನು ತಲುಪಲಿ. ಮುಂಬರುವ ವರ್ಷಗಳಲ್ಲಿ ಅವರಿಗೆ ನಿರಂತರ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi"
*****