ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಪದಕ ಗೆದ್ದಿದ್ದಕ್ಕಾಗಿ ನಿತೇಶ್ ಕುಮಾರ್ ಮತ್ತು ಪ್ರಮೋದ್ ಭಗತ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 23 OCT 2026 7:02PM by PIB Bengaluru

ಏಷ್ಯನ್ ಪ್ಯಾರಾ ಕ್ರೀಡಾಕೂಟದ ಪುರುಷರ ಸಿಂಗಲ್ಸ್ ಎಸ್.ಎಲ್.3 ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದ ನಿತೇಶ್ ಕುಮಾರ್ ಮತ್ತು ಬೆಳ್ಳಿ ಪದಕವನ್ನು ಗೆದ್ದ ಪ್ರಮೋದ್ ಭಗತ್ ಅವರುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

"ಇಬ್ಬರೂ ಕ್ರೀಡಾಪಟುಗಳು ಅದ್ಭುತ ಸಾಧನೆ ತೋರಿದ್ದಾರೆ" ಎಂದು ಶ್ರೀ ಮೋದಿಯವರು ಹೇಳಿದ್ದಾರೆ, ಹಾಗೂ "ಅವರುಗಳು ದೇಶವನ್ನು ಹೆಮ್ಮೆಪಡುವಂತೆ ಮಾಡುವುದನ್ನು ಸದಾ ಮುಂದುವರಿಸುತ್ತಾರೆ" ಎಂದು ಆಶಿಸಿದ್ದಾರೆ.

 ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:

"ಭಾರತೀಯ ಪ್ಯಾರಾ ಬ್ಯಾಡ್ಮಿಂಟನ್ ಪ್ರಕಾಶಮಾನವಾಗಿ ಹೊಳೆಯುತ್ತಿದೆ! ಏಷ್ಯನ್ ಪ್ಯಾರಾ ಕ್ರೀಡಾಕೂಟದ ಪುರುಷರ ಸಿಂಗಲ್ಸ್ ಎಸ್.ಎಲ್.3 ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದ ನಿತೇಶ್ ಕುಮಾರ್ ಮತ್ತು ಬೆಳ್ಳಿ ಪದಕವನ್ನು ಗೆದ್ದ ಪ್ರಮೋದ್ ಭಗತ್ ಅವರುಗಳಿಗೆ ನನ್ನ ಅಭಿನಂದನೆಗಳು. ಇಬ್ಬರೂ ಕ್ರೀಡಾಪಟುಗಳು ಅದ್ಭುತ ಸಾಧನೆ ಸಾಧಿಸಿದ್ದಾರೆ. ಅವರುಗಳು ದೇಶವನ್ನು ಹೆಮ್ಮೆಪಡುವುದನ್ನು ಸದಾಕಾಲ ಮುಂದುವರಿಸಲಿ: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2327886) ವಿಸಿಟರ್ ಕೌಂಟರ್ : 18
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu , Malayalam