ಪ್ರಕಟಣಾ ದಿನಾಂಕ:
26 OCT 2026 8:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆಯುತ್ತಿರುವ 12ನೇ ಬ್ರಿಕ್ಸ್ ಸಂಸದೀಯ ವೇದಿಕೆ 2026ರಲ್ಲಿ ಬ್ರಿಕ್ಸ್ ರಾಷ್ಟ್ರಗಳ ಸಂಸದರೊಂದಿಗೆ ಅದ್ಭುತ ಸಂವಾದ ನಡೆಸಿದರು.
ಸಂವಾದದ ವೇಳೆ ಪ್ರಧಾನಮಂತ್ರಿ ಮತ್ತು ಭೇಟಿ ನೀಡಿದ ಸಂಸದೀಯ ಪ್ರತಿನಿಧಿಗಳು ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಚಿಂತನೆಗಳನ್ನು ವಿನಿಮಯ ಮಾಡಿಕೊಂಡರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
"ದೆಹಲಿಯಲ್ಲಿ ನಡೆಯುತ್ತಿರುವ 12ನೇ ಬ್ರಿಕ್ಸ್ ಸಂಸದೀಯ ವೇದಿಕೆ 2026ರಲ್ಲಿ ಬ್ರಿಕ್ಸ್ ರಾಷ್ಟ್ರಗಳ ಸಂಸದರೊಂದಿಗೆ ಅದ್ಭುತ ಸಂವಾದ ನಡೆಸಿದೆ. ನಾವು ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ."
*****