ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹರಿಯಾಣ ರಾಜ್ಯ ಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 NOV 2026 12:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಭವ್ಯ ಇತಿಹಾಸ, ಗಮನಾರ್ಹ ಶೌರ್ಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯಿಂದ ಅಲಂಕರಿಸಲ್ಪಟ್ಟಿರುವ ಹರಿಯಾಣವು ರಾಷ್ಟ್ರಕ್ಕೆ ಹೆಮ್ಮೆಯ ಮೂಲವಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಇಲ್ಲಿನ ಜಾನಪದ ಸಂಪ್ರದಾಯಗಳು ಮತ್ತು ರೋಮಾಂಚಕ ಗ್ರಾಮೀಣ ಸಂಸ್ಕೃತಿ ಸದಾ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಎಂದು ಹೇಳಿದ್ದಾರೆ.

"ಹರಿಯಾಣದ ಜನರು ಕೃಷಿ, ಕ್ರೀಡೆ, ರಕ್ಷಣಾ ಸೇವೆಗಳು, ಕೈಗಾರಿಕೆ, ಶಿಕ್ಷಣ ಮತ್ತು ನವೋದ್ಯಮಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಮೂಲಕ ತಮ್ಮ ಪ್ರತಿಭೆ ಮತ್ತು ದೃಢನಿಶ್ಚಯವನ್ನು ಪ್ರದರ್ಶಿಸಿದ್ದಾರೆ. ರಾಜ್ಯದ ಕ್ರೀಡಾಪಟುಗಳು ತ್ರಿವರ್ಣ ಧ್ವಜದ ಹೆಮ್ಮೆಯನ್ನು ಹೆಚ್ಚಿಸುತ್ತಿದ್ದಾರೆ. ಇದೇವೇಳೆ, ರಾಜ್ಯದ ರೈತರು ದೇಶದ ಆಹಾರ ಭದ್ರತೆಯನ್ನು ಬಲಪಡಿಸುತ್ತಿದ್ದಾರೆ", ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ ʻಎಕ್ಸ್‌ʼನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

हरियाणा दिवस की राज्य के मेरे सभी परिवारजनों को बहुत-बहुत बधाई और शुभकामनाएं!

गौरवशाली इतिहास, अद्भुत पराक्रम और समृद्ध संस्कृति से सुसज्जित हमारा यह प्रदेश देश की शान है। यहां की लोक परंपराओं और जीवंत ग्रामीण संस्कृति ने राष्ट्र की सांस्कृतिक धरोहर को हमेशा समृद्ध किया है।

हरियाणा के लोगों ने अपने परिश्रम और समर्पण से कृषि, खेल और रक्षा सेवाओं से लेकर उद्योग, शिक्षा और स्टार्टअप तक अपनी प्रतिभा और संकल्प का लोहा मनवाया है। यहां के खिलाड़ी तिरंगे का मान बढ़ा रहे हैं, तो अन्नदाता देश की खाद्य सुरक्षा को मजबूती दे रहे हैं। 

मैं कामना करता हूं कि यह विशेष अवसर यहां के सभी लोगों के जीवन में खुशहाली लेकर आए।

 

*****

 


(ಪ್ರಕಟಣೆ ಐ.ಡಿ.: 2331134) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Manipuri , Assamese , Gujarati , Tamil , Malayalam