ಪ್ರಕಟಣಾ ದಿನಾಂಕ:
02 NOV 2026 2:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜಸ್ಥಾನದ ಝುಂಝುನುದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು, ಮೃತಪಟ್ಟವರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯ ಅವರು ತಮ್ಮ 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
ರಾಜಸ್ಥಾನದ ಝುಂಝುನುದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ.
ಮೃತರ ಪ್ರತಿ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi
*****