ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಮತ್ತು ಉಕ್ರೇನ್ ಅಧ್ಯಕ್ಷರಾದ ವೊಲೊಡಿಮಿರ್ ಝೆಲೆನ್ಸ್ಕಿ ಮಾತುಕತೆ 


ಪ್ರಸ್ತುತದ ಸಂಘರ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತಮ್ಮ ದೃಷ್ಟಿಕೋನ ಹಂಚಿಕೊಂಡಿರುವ ಅಧ್ಯಕ್ಷರಾದ ಝೆಲೆನ್ಸ್ಕಿ

ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಕೊಡುಗೆ ನೀಡಲು ಭಾರತ ಸಿದ್ಧ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು

ಭಾರತ-ಉಕ್ರೇನ್ ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಕುರಿತು ಉಭಯ ನಾಯಕರ ಚರ್ಚೆ

ಪ್ರಕಟಣಾ ದಿನಾಂಕ: 09 NOV 2026 6:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಪ್ರಸ್ತುತದ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಧ್ಯಕ್ಷ ಝೆಲೆನ್ಸ್ಕಿ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು.

ಭಾರತದ ಮಾನವ-ಕೇಂದ್ರಿತ ಕ್ರಮ ಹಾಗೂ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂಬ ಸ್ಥಿರ ನಿಲುವನ್ನು ಮತ್ತೊಮ್ಮೆ ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಂಘರ್ಷ ಅಂತ್ಯಗೊಳಿಸಲು ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳುವ ಎಲ್ಲಾ ಪ್ರಯತ್ನಗಳಿಗೆ ಕೊಡುಗೆ ನೀಡಲು ಭಾರತ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.

ಭಾರತ-ಉಕ್ರೇನ್ ಎರಡೂ ದೇಶಗಳ ಜನರ ಪರಸ್ಪರ ಹಿತಾಸಕ್ತಿಗಾಗಿ, ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆಯೂ ಇಬ್ಬರೂ ನಾಯಕರು ಚರ್ಚಿಸಿದರು.

 

*****


(ಪ್ರಕಟಣೆ ಐ.ಡಿ.: 2334553) ವಿಸಿಟರ್ ಕೌಂಟರ್ : 18
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Manipuri , Bengali , Assamese , Punjabi , Gujarati , Tamil , Telugu , Malayalam