ಲೋಕಸಭಾ ಸಚಿವಾಲಯ
azadi ka amrit mahotsav

ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಲೋಕಸಭೆಯ ಸ್ಪೀಕರ್

ಪ್ರಕಟಣಾ ದಿನಾಂಕ: 11 NOV 2026 3:06PM by PIB Bengaluru

ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನಾಚರಣೆಯ ದಿನವಾದ ಇಂದು ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿರುವ ಲೋಕಸಭೆಯ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು, ಮೌಲಾನಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಾರತ ಸರ್ಕಾರದ ಸಂಸದೀಯ ವ್ಯವಹಾರಗಳ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರಣ್ ರಿಜಿಜು; ಸಂಸತ್ ಸದಸ್ಯರು ಮತ್ತು ಮಾಜಿ ಸದಸ್ಯರು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಶ್ರೀ ಉತ್ಪಲ್ ಕುಮಾರ್ ಸಿಂಗ್ ಮತ್ತು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಸಿ. ಮೋದಿ ಅವರು ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಗೌರವ ನಮನ ಸಲ್ಲಿಸಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರಿಗೆ ಲೋಕಸಭಾ ಸಚಿವಾಲಯವು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಹೊರತಂದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ವ್ಯಕ್ತಿತ್ವ ಹೊಂದಿರುವ ಕಿರುಹೊತ್ತಿಗೆಯನ್ನು ನೀಡಲಾಯಿತು.

1959ರ ಡಿಸೆಂಬರ್ 16 ರಂದು ಸಂವಿಧಾನ ಸದನದ (ಹಿಂದಿನ ಸಂಸತ್ ಭವನ) ಸೆಂಟ್ರಲ್ ಹಾಲ್‌ನಲ್ಲಿ ಅಂದಿನ ಭಾರತದ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಭಾವಚಿತ್ರ ಅನಾವರಣಗೊಳಿಸಿದ್ದರು.

ಪ್ರಖ್ಯಾತ ಸ್ವಾತಂತ್ರ್ಯ ಹೋರಾಟಗಾರ, ಮಹಾನ್ ಶಿಕ್ಷಣ ತಜ್ಞ ಮತ್ತು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವ "ಭಾರತ ರತ್ನ" ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಸಂವಿಧಾನ ಭವನದ ಸೆಂಟ್ರಲ್ ಹಾಲ್‌ನಲ್ಲಿಂದು  ನಾವು ಪುಷ್ಪ ನಮನ ಸಲ್ಲಿಸಿ ರಾಷ್ಟ್ರ ನಿರ್ಮಾಣ, ಶಿಕ್ಷಣ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಅವರ ಅನುಪಮ ಕೊಡುಗೆಗಳನ್ನು ಸ್ಮರಿಸಿದ್ದೇವೆ. ಅವರ ಆಲೋಚನೆಗಳು ಮತ್ತು ಆದರ್ಶಗಳು ರಾಷ್ಟ್ರಕ್ಕೆ ಶಾಶ್ವತ ದಾರಿದೀಪವಾಗಿವೆ.

 

*****


(ಪ್ರಕಟಣೆ ಐ.ಡಿ.: 2335031) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी