ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್‌ ಆರ್‌ ಎಫ್‌ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 13 NOV 2026 8:41PM by PIB Bengaluru

ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ: 

“ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಶೋಕದ ಸಮಯದಲ್ಲಿ, ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬದವರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ ಎಂ ಎನ್ ಆರ್ ಎಫ್) ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2336213) ವಿಸಿಟರ್ ಕೌಂಟರ್ : 14
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Punjabi , Gujarati , Odia , Tamil , Telugu , Malayalam