ಪ್ರಕಟಣಾ ದಿನಾಂಕ:
14 NOV 2026 3:18PM by PIB Bengaluru
ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಸಂವಿಧಾನ ಸದನದ ಸೆಂಟ್ರಲ್ ಹಾಲ್ ನಲ್ಲಿರುವ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ; ಸಂಸದರು; ಮಾಜಿ ಸಂಸತ್ ಸದಸ್ಯರು; ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಶ್ರೀ ಉತ್ಪಲ್ ಕುಮಾರ್ ಸಿಂಗ್ ಮತ್ತು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಸಿ. ಮೋದಿ ಅವರು ಈ ಸಂದರ್ಭದಲ್ಲಿ ಪುಷ್ಪ ನಮನ ಸಲ್ಲಿಸಿದರು.
ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರವನ್ನು ಅಂದಿನ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರು ಸಂವಿಧಾನ್ ಸದನದ (ಅಂದಿನ ಸಂಸತ್ ಭವನ) ಸೆಂಟ್ರಲ್ ಹಾಲ್ ನಲ್ಲಿ 1966 ರ ಮೇ 05ರಂದು ಅನಾವರಣಗೊಳಿಸಿದರು.
*****