ಪ್ರಕಟಣಾ ದಿನಾಂಕ:
14 NOV 2026 9:55PM by PIB Bengaluru
ಪಂಜಾಬ್‌ನ ತಾರ್ನ್ ತರಣ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿರುವ ಅವರು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಪಂಜಾಬ್ ನ ತಾರ್ನ್ ತರಣ್ ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"
*****