ಪ್ರಕಟಣಾ ದಿನಾಂಕ:
22 NOV 2026 10:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಶ್ರೀ ನರೇಂದ್ರ ಮೋದಿ ಅವರು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಧನವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi
*****